ಬೆಂಗಳೂರು: ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್ ಡಿ ದೇವೇಗೌಡ ರವರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ರವರ ಆದೇಶದ ಮೇರೆಗೆ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆಯನ್ನು ದಿನಾಂಕ: 17.05.2024ನೇ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಹೋಟೆಲ್ ಪೈ ವೈಸ್ರಾಯ್, ಜಯನಗರ 3ನೇ ಬ್ಲಾಕ್, ಬೆಂಗಳೂರುನಲ್ಲಿ ಜರುಗಿತು.
ಈ ಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ.ಕೆ. ರಾಮಮೂರ್ತಿ ರವರು, ವಿಧಾನಪರಿಷತ್ ಸದಸ್ಯರುಗಳಾದ ಶ್ರೀ ಕೆ. ಎ. ತಿಪ್ಪೇಸ್ವಾಮಿ ರವರು ಹಾಗೂ ವಿಧಾನಪರಿಷತ್ ಸದಸ್ಯರುಗಳಾದ ಡಾ. ಟಿ. ಎ. ಶರವಣ ರವರು,
ಚಿಕ್ಕಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉದಯ್ ಗರುಡಚಾರ, ಬೆಂಗಳೂರು ದಕ್ಷಿಣ ಶಾಸಕರಾದ ಎಂ.ಕೃಷ್ಣಪ್ಪ , ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ , ವಿಧಾನ ಪರಿಷತ್ ಸದಸ್ಯರು ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಅ. ದೇವೇಗೌಡ ರವರು ಉಪಸ್ಥಿತರಿದ್ದರು