ತುಮಕೂರು : ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದ ಯುವತಿ ಮಗುವಿನ ಜನನವನ್ನೆ ಮರೆಮಾಚಿ ಹಸುಗೂಸಿನ ಸಾವಿಗೆ ಕಾರಣವಾದ ಘಟನೆ ತುಮಕೂರಿನ ಅರೇಗುಜ್ಜನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಲೂಸ್ ಲೂಸ್ ಬಟ್ಟೆ ಹಾಕಿಕೊಂಡು ಗರ್ಭ ಧರಿಸಿರೋದನ್ನೇ ಮುಚ್ಚಿಟ್ಟಿದ್ದ ಅವಿವಾಹಿತೆ ಕೊನೆಗೆ ಯಾರಿಗೂ ಗೊತ್ತಾಗದಂತೆ ತಾನೇ ಸ್ವಯಂ ಹೆರಿಗೆ ಮಾಡಿಕೊಂಡಿದ್ದ ಮಹಿಳೆ ಬಳಿಕ ಸಮಾಜಕ್ಕೆ ಹೆದರಿ ಹೆತ್ತಕೂಸನ್ನೆ ಬಯಲಿಗೆಸೆದ ಅವಿವಾಹಿತೆ
ಪೋಷಕರು ಇಲ್ಲದ ಹಿನ್ನೆಲೆ ಸ್ವಂತ ಅಕ್ಕನ ಮನೆಯಲ್ಲಿ ಆಶ್ರಯ ಪಡೆದಿದ್ದ ಯುವತಿ ಮೂಲತಃ ಗೌರೀಪುರ ಗ್ರಾಮದ 25 ವರ್ಷದ ಯುವತಿ ಮೊನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋಗಿ ತಾನೇ ಸ್ವಯಂ ಹೆರಿಗೆ ಮಾಡಿಕೊಂಡಿದ್ದ ಯುವತಿ ನಂತರ ಮಗುವನ್ನ ಅಲ್ಲಿಯೇ ಪಕ್ಕದಲ್ಲಿ ಎಸೆದು ಮನೆಗೆ ತೆರಳಿದ್ದ ಯುವತಿ.
ಮನೆಗೆ ಹೋಗಿ ಋತುಚಕ್ರದ ಕಾರಣ ಹೇಳಿ ಸ್ನಾನ ಮಾಡಿದ್ದ ಯುವತಿ ಬೆಳಗ್ಗೆ ಗ್ರಾಮಸ್ಥರ ಕಣ್ಣಿಗೆ ಬಿದ್ದ ನವಜಾತ ಹೆಣ್ಣುಮಗುವಿನ ಶವ ಕಂಡ ಕೂಡಲೇ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟು ರಕ್ತಸ್ರಾವದಿಂದ ಬಳಲಿದ್ದ ಯುವತಿಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೆ ನವಜಾತ ಶಿಶುವಿನ ಶವ ಕೂಡ ಶವಾಗಾರಕ್ಕೆ ರವಾನೆ ಮಾಡಿದ್ದು ಘಟನೆಯ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು, ತನಿಖೆ ಮುಂದುವರೆದಿದೆ.