ಕೊಪ್ಪಳ: ಬಲ್ದೋಟಾ ಸ್ಟೀಲ್ ಕಾರ್ಖಾನೆ ನಿರ್ಮಾಣದ ಸಿದ್ದತೆಗಳನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಕೊಪ್ಪಳ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿನಗಳನ್ನೊಳಗೊಂಡ ಒಂದು ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ನಿರ್ಮಾಣ ಆಗುತ್ತಿರುವ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ವಿಸ್ತರಣೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಇಂದು ಬೆಳಿಗ್ಗೆ ಕೊಪ್ಪಳ ಜಿಲ್ಲೆಯ ಸರ್ವ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ನಿವಾಸದಲ್ಲಿ ಜರುಗಿತು. ನಂತರ ಕೊಪ್ಪಳ ಜಿಲ್ಲೆಯ ಈ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿತು.
ಬಲ್ಡೋಟಾ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ; ಪ್ರತಿಭಟನಾ ಮೆರವಣಿಗೆ
ಈ ಸಂದರ್ಭದಲ್ಲಿ ಎಲ್ಲರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.