ಬೆಂಗಳೂರು: ಅತ್ತೆ ಸೊಸೆಯ ನಡುವಿನ ಜಗಳ ಸಾಮಾನ್ಯ. ಅಡುಗೆ, ಮನೆಕೆಲಸ, ವರದಕ್ಷಿಣೆ ಇತ್ಯಾದಿ ಕಾರಣಗಳಿಗೆ ಅತ್ತೆ ಮತ್ತು ಸೊಸೆಯ ಮಧ್ಯೆ ಜಗಳಗಳು ಏರ್ಪಡುತ್ತವೆ. ಈ ವಿಚಾರಗಳ ಕಾಣದಿಂದ ಸೊಸೆಯಂದಿರು ತಮ್ಮ ಅತ್ತೆಯ ವಿರುದ್ಧ ದೂರು ನೀಡಲು ಪೋಲಿಸ್ ಠಾಣೆಯ ಮೆಟ್ಟಿಲೇರಿದ ಹಲವು ಘಟನೆಗಳನ್ನು ನಾವು ನೋಡಿರುತ್ತೇವೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಎಂದು ಸೊಸೆ ವೈದ್ಯರಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಿಳೆಯ ಸಂದೇಶ ಕಂಡು ವೈದ್ಯರು ಅಚ್ಚರಿಗೊಂಡಿದ್ದಾರೆ. ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್ ಕುಮಾರ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್ಸ್ಟಾಗ್ರಾಮ್ ಮೂಲಕ ಡಾ. ಸುನಿಲ್ ಕುಮಾರ್ರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ. ನಂತರ, ಸೋಮವಾರ ರಂದು ಮಹಿಳೆ, ಡಾ. ಸುನಿಲ್ ಕುಮಾರಿಗೆ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿದ್ದಾಳೆ.
Silver Anklets: ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
ನಮ್ಮ ಅತ್ತೆಗೆ ವಯಸ್ಸಾಗಿದೆ, ತುಂಬಾ ಹಿಂಸೆ ಕೊಡ್ತಾರೆ. ಏನಾದ್ರೂ ಹೇಳ್ತಿರಾ ಹೇಗೆ ಸಾಯಿಸೋದು ಅಂತ. ಟ್ಯಾಬ್ಲೆಟ್ ಒಂದು..ಎರಡು ತೊಗೊಂಡ್ರೆ ಸಾಯ್ತರಲ್ಲ ಅದು ಹೇಳಿ ಎಂದು ಡಾಕ್ಟರ್ ಗೆ ವಾಟ್ಸಾಪ್ ನಲ್ಲಿ ಮಹಿಳೆ ಕೇಳಿದ್ದಾರೆ. ಆ ಬಳಿಕ ಮಹಿಳೆ ಕೂಡಲೇ ಸಂದೇಶಗಳನ್ನು ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾರೆ. ಮಹಿಳೆಯ ಸಂದೇಶ ಓದಿ ಶಾಕ್ ಆದ ವೈದ್ಯ ಸುನಿಲ್ ಕುಮಾರ್ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ.