ದೆಹಲಿ: ಕಳೆದ ವಾರ ಸಂಸತ್ತು ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ (Criminal Laws) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸೋಮವಾರ ಅಂಕಿತ ಹಾಕಿದ್ದಾರೆ.
ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಾಯಿಸಿದ್ದು, ಮೂರು ಹೊಸ ಕಾನೂನುಗಳಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಅಂಗೀಕರಿಸಲಾಗಿತ್ತು
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿಕ್ಷೆ ನೀಡುವ ಬದಲು ನ್ಯಾಯ ಒದಗಿಸುವತ್ತ ಗಮನ ಹರಿಸಲಾಗಿದೆ ಎಂದು ಹೇಳಿದ್ದರು.
ಆಗಸ್ಟ್ನಲ್ಲಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಸೂದೆಗಳನ್ನು ಮೊದಲು ಮಂಡಿಸಲಾಗಿತ್ತು. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಹಲವಾರು ಶಿಫಾರಸುಗಳನ್ನು ಮಾಡಿದ ನಂತರ, ಸರ್ಕಾರವು ಬಿಲ್ಗಳನ್ನು ಹಿಂಪಡೆಯಲು ನಿರ್ಧರಿಸಿತು. ಕಳೆದ ವಾರ ಅವುಗಳ ಮರುರೂಪಿಸಿದ ಆವೃತ್ತಿಗಳನ್ನು ಪರಿಚಯಿಸಿತ್ತು.