ನವದೆಹಲಿ:- ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳಾ ಆಯೋಗ ಬಹಿರಂಗಪಡಿಸಿದೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಘಟನೆ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ NCW ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.
ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣದ ಬಗ್ಗೆ ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ.
ಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆಸ್ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್ ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.