ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ (Narendra Modi) ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್ ಶೋ ಆರಂಭಿಸಿದ್ದಾರೆ.
ದೆಹಲಿಯಿಂದ (New Delhi) ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ (Ayodhya Airport) ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು. ರೋಡ್ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ.
ಲಾಕ್ ಆಗುತ್ತಾ ರಾಜಧಾನಿ ಬೆಂಗಳೂರು – ಕನ್ನಡ ಸಂಘಟನೆಗಳು ಕೊಟ್ಟ ಎಚ್ಚರಿಕೆ ಏನು!?
ಪ್ರಧಾನಿ ರೋಡ್ ಶೋ (Road Show) ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.