ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಬುಧವಾರ ಪವಿತ್ರ ಸ್ನಾನ ಮಾಡಲಿದ್ದಾರೆ
ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ!
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಹೊಸದಿಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ.
ನರೇಂದ್ರ ಮೋದಿ ಬೆಳಗ್ಗೆ 10.05 ಕ್ಕೆ ಪ್ರಯಾಗ್ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ 10.10ಕ್ಕೆ ಡಿಪಿಎಸ್ ಹೆಲಿಪ್ಯಾಡ್ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್ಗೆ ತೆರಳಲಿದ್ದಾರೆ. 10.50ಕ್ಕೆ ಏರಿಯಲ್ ಘಾಟ್ನಿಂದ ದೋಣಿಯಲ್ಲಿ ಮಹಾ ಕುಂಭಮೇಳಕ್ಕೆ ಪ್ರಯಾಣಿಸಲಿದ್ದಾರೆ. ಬೆಳಗ್ಗೆ 11 ರಿಂದ 11.30 ಅವಧಿಯಲ್ಲಿ ಸಂಗಮ್ ಘಾಟ್ನಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. 12.30ಕ್ಕೆ ವಾಯುಪಡೆಯ ವಿಮಾನದಲ್ಲಿ ದಿಲ್ಲಿಗೆ ಮರಳಲಿದ್ದಾರೆ.
ಮೋದಿ ಕುಂಭಮೇಳದಲ್ಲಿ ಭಾಗವಹಿಸಿರುವ ಸಾಧು-ಸಂತರ ಜತೆಗೆ ಕೆಲಕಾಲ ಮಾತುಕತೆ ನಡೆಸಲಿದ್ದಾರೆ.