ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ. ಇದೇ ವೇಳೆ ಟ್ರಂಪ್ ಸರ್ಕಾರದಲ್ಲಿ ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.
ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ ಮೋದಿ, ತುಳಸಿ ಅವರೊಂದಿಗೆ ಭಾರತ-ಯುಎಸ್ ಸ್ನೇಹದ ಬಗ್ಗೆ ಚರ್ಚಿಸಿದೆ. ಟ್ರಂಪ್ ಅವರ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ.
ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಮೋದಿ ಅವರನ್ನು ಭಾರತೀಯ ಅನಿವಾಸಿಗಳ ಬೃಹತ್ ಜನಸಮೂಹ ಸ್ವಾಗತಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿತು.
ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ! ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ವಲಸಿಗರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದು ಮೋದಿ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.