ಕವರಟ್ಟಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ (Lakshadweep) ವಾಸ್ತವ್ಯ ಹೂಡಿದ್ದಾಗ ತೆಗೆಸಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ. ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರವಾಸದಲ್ಲಿದ್ದ ಮೋದಿ ಅವರು ಹಲವು ಮನಮೋಹಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಲಕ್ಷದ್ವೀಪದಲ್ಲಿ ಸ್ನಾರ್ಕ್ಲಿಂಗ್ (Snorkeling) ಮಾಡುತ್ತಿರುವ ಫೋಟೋಗಳು ಹಾಗೂ ಕಡಲತೀರಗಳಲ್ಲಿ ಮಾರ್ನಿಂಗ್ ವಾಕ್ ಮಾಡುತ್ತಾ ಅನುಭವಿಸಿದ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಹಂಚಿಕೊಂಡ ಚಿತ್ರದಲ್ಲಿ, ಅವರು ಸಮುದ್ರತೀರದಲ್ಲಿ ಕುರ್ಚಿಯ ಮೇಲೆ ಕುಳಿತು ಕಾಲ ಕಳೆಯುತ್ತಿರುವುದು, ಈ ವೇಳೆ ಅವರು ಲಕ್ಷದ್ವೀಪದ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ.
ಮತ್ತೊಂದು ಚಿತ್ರದಲ್ಲಿ, ಕಪ್ಪು ಕುರ್ತಾ ಪೈಜಾಮಾ ಧರಿಸಿ ಬೀಚ್ನಲ್ಲಿ ದಡದಲ್ಲೇ ನಡೆದಾಡುತ್ತಾ ಕಡಲ ತೀರದ ಸೌಂದರ್ಯ ಸವಿದಿದ್ದಾರೆ. ಮತ್ತೊಂದು ಚಿತ್ರದಲ್ಲಿ ಸಮುದ್ರತೀರದಲ್ಲಿ ಶಾಲು ಹೊದ್ದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪ್ರವಾಸವನ್ನು ಇಷ್ಟಪಡುವ ಜನರು ಖಂಡಿತವಾಗಿಯೂ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ,
Recently, I had the opportunity to be among the people of Lakshadweep. I am still in awe of the stunning beauty of its islands and the incredible warmth of its people. I had the opportunity to interact with people in Agatti, Bangaram and Kavaratti. I thank the people of the… pic.twitter.com/tYW5Cvgi8N
— Narendra Modi (@narendramodi) January 4, 2024
ಪ್ರಾಚೀನ ಕಡಲತೀರಗಳ ಉದ್ದಕ್ಕೂ ಆ ಮುಂಜಾನೆ ನಡಿಗೆಗಳು ಹೆಚ್ಚು ಆನಂದದ ಕ್ಷಣಗಳಾಗಿದ್ದವು. ರಮಣೀಯ ಸೌಂದರ್ಯದ ಜೊತೆಗೆ ಲಕ್ಷದ್ವೀಪದ ಪ್ರಶಾಂತತೆಯೂ ಮನಮೋಹಕವಾಗಿದೆ. ಇಲ್ಲಿನ ಪ್ರಶಾಂತ ವಾತಾವರಣವು 140 ಕೋಟಿ ಭಾರತೀಯರ ಕಲ್ಯಾಣಕ್ಕಾಗಿ ಇನ್ನಷ್ಟು ಶ್ರಮಿಸುವುದು ಹೇಗೆ ಎಂಬುದನ್ನು ಪ್ರತಿಬಿಂಬಿಸಲು ಅವಕಾಶ ನೀಡಿತು ಎಂದು ಬರೆದುಕೊಂಡಿದ್ದಾರೆ.