ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ಸ್ಟಾರ್ ನಾಯಕರು ಹಾಗೂ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಏ.20ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಚಿಕ್ಕಬಳ್ಳಾಪುರಕ್ಕೆ (Chikkaballapura) ಆಗಮಿಸಲಿದ್ದು, ಚಿಕ್ಕಬಳ್ಳಾಪುರ ಹಾಗೂ ಕೋಲಾರ (Kolar) ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.
ಏ.20ರಂದು ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದು, ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. 3:30ರಿಂದ 4:30ರವರೆಗೂ ಚಿಕ್ಕಬಳ್ಳಾಪುರದಲ್ಲಿ ಇರಲಿದ್ದು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿಗಳ ಪರ ಭಾಷಣ ಮಾಡಲಿದ್ದಾರೆ.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಬಿಎಸ್ ಯಡಿಯೂರಪ್ಪ, ಹೆಚ್ಡಿ ಕುಮಾರಸ್ವಾಮಿ, ಬಿ.ವೈ ವಿಜಯೇಂದ್ರ, ಆರ್.ಅಶೋಕ್ ಸಾಥ್ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಅಗಲಗುರ್ಕಿ ಬಳಿ ಸಮಾವೇಶ ನಡೆಯಲಿದೆ.