ನವದೆಹಲಿ: ನಾಡಿನಾದ್ಯಂತ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮಾರುಕಟ್ಟೆಗೆ ದಾಂಗುಡಿ ಇಡುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ರಾಸುಗಳಿಂದ ಕಿಚ್ಚು ಹಾಯಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.
ಇನ್ನೂ ಸ್ನೇಹಿತರು, ಬಂಧು–ಬಾಂಧವರು ಪರಸ್ಪರ ಶುಭಕೋರುತ್ತಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಬ್ಬದ ಶುಭ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು.
H Anjaneya: ಬಿಜೆಪಿ ರಾಮನ ಹೆಸರಲಿ ರಾಜಕೀಯ ಮಾಡ್ತಿರೋದ್ರಿಂದ ನಾವು ಹೋಗಲ್ಲ: ಎಚ್ ಆಂಜನೇಯ
ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಗಣ್ಯಮಾನ್ಯರೂ ಹಬ್ಬಕ್ಕೆ ಶುಭಹಾರೈಸಿದ್ದಾರೆ.