ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 64 ನೇ ಜನ್ಮದಿನ ಹಿನ್ನೆಲೆ ಅನೇಕ ಗಣೈರು ನಾಯಕರು ಶುಭ ಕೋರಿದ್ದಾರೆ. ಜೆಡಿಎಸ್ ನಾಯಕರು ಸೇರಿದಂತೆ ಕರ್ನಾಟಕದ ಅನೇಕ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಇದರ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಹೆಚ್ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ! ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ನನ್ನ ಶುಭಾಶಯಗಳು. ದೇವರು ಉತ್ತಮ ಆಯುಷ್ಯ, ಒಳ್ಳೆಯ ಆರೋಗ್ಯವನ್ನು ನೀಡಿ ನಿಮ್ಮನ್ನು ಕಾಪಾಡಲಿ ಎಂದು ಪ್ರಧಾನಿ ಮೋದಿ ಶುಭಾಶಯಗಳನ್ನು ಕೋರಿದ್ದಾರೆ.