ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿಲಿದ್ದಾರೆ.
ಹೆಚ್ಎಎಲ್ (HAL) ಸಂಸ್ಥೆಯ ಕಾರ್ಯಕ್ರಮ ನಿಮಿತ್ತ ಆಗಮಿಸುತ್ತಿರುವ ಪ್ರಧಾನಿಯವರು ಬೆಳಗ್ಗೆ 9:15ಕ್ಕೆ ಅಂತಾರಾಷ್ಟ್ರೀಯ ವಿಮಾ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ 9:30ರಿಂದ 12 ಗಂಟೆವರೆಗೆ ಹೆಚ್ಎಎಲ್ ಆವರಣದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ (Telangana) ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಪ್ರಧಾನಿಯವರ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.
ಇತ್ತಿಚೆಗೆ ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದ ಮೋದಿಯವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪ್ರಧಾನಿಯವರು ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೇ ದೂರವಿರಿಸಿದ್ದರು.