ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೆ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿಗೆ ತೆರಳಲಿದ್ದು ಪ್ರಧಾನಿ ಮೋದಿ ಭೇಟಿಗೆ ಕಾಲಾವಕಾಶ ಕೇಳಿದ್ದರು.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಂಸತ್ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಆಗಿದೆ.
ನಾಳೆ ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿಯಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ.