ಕಲಬುರ್ಗಿ:-ಪ್ರಧಾನಿ ನರೇಂದ್ರ ಮೋದಿಯವರ ಸುನಾಮಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಸುನಾಮಿ ಅಲೆ ಇದೆ. ದೇಶದ ಜನರು ಮೋದಿ ಅಧಿಕಾರದಲ್ಲಿ ಹೊಸ ಕನಸು ಕಾಣುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಸುಮಾರು 25 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಇಂತಹ ಗೆಲುವನ್ನು ಯಾರೂ ತಡೆಯಲಾಗದು. ಯಾವುದೇ ಗೋಡೆ, ಅಣೆಕಟ್ಟು ಸಹ ಸುನಾಮಿಯನ್ನು ತಡೆಯಲು ಸಾಧ್ಯವಿಲ್ಲ ಎಂದರು.
ಸಂಸತ್ತಿನಲ್ಲಿ ಒಂದು ಸ್ಥಾನ ಕಡಿಮೆ ಆದರೂ ರಾಜಸ್ಥಾನ್ ಆಗುವ ಕುರಿತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸೂರ್ಯ, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ 28 ಸ್ಥಾನಗಳು ಬರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.