ಬಾಂಗ್ಲಾದೇಶ: ‘ನಿಮ್ಮ ಹೆಂಡತಿಯರ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ದೇಶದ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಸದಸ್ಯರಿಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ವಿರೋಧ ಪಕ್ಷವು ಭಾರತೀಯ ಉತ್ಪನ್ನಗಳ ವಿರುದ್ಧ ಅಭಿಯಾನವನ್ನು ನಡೆಸುತ್ತಿರುವುದರ ಬಗ್ಗೆ ಸಿಡಿಮಿಡಿ ಗೊಂಡ ಹಸೀನಾ BNP ನಾಯಕರು ನಿಜವಾಗಿಯೂ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದರೆ, ಅವರು ತಮ್ಮ ಪತ್ನಿಯರ ಭಾರತೀಯ ಸೀರೆಗಳನ್ನು ಸುಡಬೇಕಾಗುತ್ತದೆ ಎಂದರು.
ಒಂದೇ ರೂಂನಲ್ಲಿ ಗಂಡ-ಹೆಂಡತಿ, ಸ್ನೇಹಿತೆಯ ನಿಗೂಢ ಸಾವು: ವಾಮಾಚಾರಕ್ಕೆ ಬಲಿಯಾದ್ರಾ..?
ಹೊಸದಿಲ್ಲಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುವ ಹಸೀನಾ, ತಮ್ಮ ಭಾಷಣದಲ್ಲಿ ವಿರೋಧ ಪಕ್ಷದವರಿಗೆ ಸಾಕಷ್ಟು ಪ್ರಶ್ನೆಗಳನ್ನು ಹಾಕಿ- ‘ನೀವು ಭಾರತೀಯ ಮಸಾಲೆಗಳಿಲ್ಲದ ಆಹಾರ ತಿನ್ನಬಹುದೇ? ಬಹಿಷ್ಕಾರ ಪ್ರಚಾರಕರ ಪತ್ನಿಯರು ಎಷ್ಟು ಭಾರತೀಯ ಸೀರೆಗಳನ್ನು ಹೊಂದಿದ್ದಾರೆ? ಅವರು ತಮ್ಮ ಹೆಂಡತಿಯರಿಂದ ಸೀರೆಗಳನ್ನು ತೆಗೆದುಕೊಂಡು ಅವುಗಳನ್ನು ಏಕೆ ಸುಡುವುದಿಲ್ಲ? ಭಾರತದ ಉತ್ಪನ್ನಗಳನ್ನು ವಿರೋಧಿಸುವವರು ನಿಜವಾಗಿಯೂ ಅವರ ಜೀವನದಲ್ಲಿ ಬಹಿಷ್ಕರಿಸಿದ್ದಾರೆಯೇ ಎಂದು ತಿಳಿಯಲು ನಾನು ಬಯಸುತ್ತೇನೆ’ ಎಂದಿದ್ದಾರೆ.