ಕೋಲಾರ: ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರ ಚಲನಲಿ ಗೇಟ್ ಸಮೀಪ ನಡಿದಿದೆ. ಸ್ಥಳದಲ್ಲಿ ಓರ್ವ ಮೃತಪಟ್ಟವರೇ, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ಮೂವರು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಸ್ಎನ್ ಖಾಸಗಿ ಬಸ್ ಹಾಗೂ ವಿದ್ಯುತ್ ಕಂಬ ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿದೆ. ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಘಟನಾ ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಅತಿವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.