ಚಿಕ್ಕೋಡಿ: ಮಕ್ಕಳನ್ನು ಶಾಲೆಗೆ ಕರೆ ತರುವಾಗ ಖಾಸಗಿ ಶಾಲಾ ಬಸ್ವೊಂದು ಪಲ್ಟಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ನಡೆದಿದೆ. ಓವರ್ ಟೆಕ್ ಮಾಡುವಾಗ ರಸ್ತೆ ಪಕ್ಕದ ತಗ್ಗಿಗೆ ಶಾಲಾ ಬಸ್ ವಾಲಿ ಪಲ್ಟಿಯಾಗಿದೆ. ಕೂಡಲೆ ಸ್ಥಳೀಯರು ಮಕ್ಕಳನ್ನು ಹಾಗೂ ಡ್ರೈವರ್ನನ್ನು ರಕ್ಷಣೆ ಮಾಡಿದ್ದಾರೆ.
ಶಾಲಾ ಮಕ್ಕಳಿಗೆ ಸಣ್ಣ- ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ತಾಲೂಕಿನ ಹಲವು ಬಾರಿ ಬಸ್ ಬಿದ್ದಿರುವ ಘಟನೆ ನಡೆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ. ಮಕ್ಕಳ ಸುರಕ್ಷತೆ ಆದ್ಯತೆ ಮರೆತು ನಿಯಮ ಪಾಲಿಸದೆ ಬೇಕಾಬಿಟ್ಟಿ ವಾಹನ ಚಲಾಯಿಸುವ ಚಾಲಕರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಳೆದ 5 ತಿಂಗಳಲ್ಲಿ ಮೂರನೇ ಪ್ರಕರಣ ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.