ಬೆಂಗಳೂರು: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ವಿವಾದ ದಿನದಿಂದ ದಿನದಕ್ಕೆ ತಾರಕಕ್ಕೇರಿತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಬೆದರಿಕೆಯಿಂದ ಡೆತ್ನೋಟ್ ಹರಿಬಿಟ್ಟು, ಸಚಿನ್ ರೈಲಿಗೆ ತಲೆಕೊಟ್ಟಿದ್ದ.. ಗುತ್ತಿಗೆದಾರನ ಆತ್ಮಹತ್ಯೆ ಹಿಂದೆ ಸಚಿವರ ಹೆಸರು ಕೇಳಿ ಬರ್ತಿದ್ದಂತೆ, ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಡೆತ್ ನೋಟ್ನಲ್ಲಿ ಸಚಿವರ ಹೆಸರು ಇಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಅವರು ದಾಖಲಾತಿ ಇಟ್ಟುಕೊಂಡು ಹೋರಾಟ ಮಾಡಬೇಕು. ಸಚಿನ್ ಡೆತ್ ನೋಟ್ ಬರೆದಿದ್ದಾನೆ. ಅದರಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇಲ್ಲ. ಯಾಕೆ ಅವರು ರಾಜೀನಾಮೆ ಕೊಡಬೇಕು. ಅವರ ಪಾತ್ರ ಏನು ಇಲ್ಲ, ಹಾಗಾದರೆ ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಕೇಸ್ನಲ್ಲಿ ಡೆತ್ ನೋಟ್ನಲ್ಲಿ ಈಶ್ವರಪ್ಪ ಹೆಸರು ಇತ್ತು. ಈ ಕೇಸ್ನಲ್ಲಿ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇದೆಯಾ? ಪ್ರಿಯಾಂಕ್ ಖರ್ಗೆ ಹೆಸರು ಎಲ್ಲೂ ಕೂಡಾ ಇಲ್ಲ. ಪ್ರಿಯಾಂಕ್ ಖರ್ಗೆ ಈಗಾಗಲೇ ಹೇಳಿದ್ದಾರೆ ಯಾವುದೇ ತನಿಖೆಗೆ ಸಿದ್ದ ಅಂತ. ಈಗ ನಾವು ದೂರಿನ ಮೇಲೆ CODಗೆ ಪ್ರಕರಣ ಕೊಟ್ಟಿದ್ದೇವೆ. COD ವರದಿ ಕೊಡಲಿ. ವರದಿ ಕೊಟ್ಟ ಮೇಲೆ ಪ್ರಿಯಾಂಕ್ ಖರ್ಗೆ ತಪ್ಪು ಮಾಡಿದ್ದಾರೆ ಎಂದು ಗೊತ್ತಾಗಬೇಕಲ್ಲವಾ? ಸದ್ಯಕ್ಕೆ ಅವರ ಮೇಲೆ ಯಾವುದೇ ದಾಖಲೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ.