ಕೇರಳ: ಅಣ್ಣನ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಯಶಸ್ವಿಯಾಗಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಸ್ಥಾನಕ್ಕೆ ನವೆಂಬರ್ 13 ರಂದು ಉಪಚುನಾವಣೆಗೆ ಮತದಾನ ನಡೆದಿತ್ತು ಫಲಿತಾಂಶ ಹೊರಬಿದ್ದಿದೆ.
ಹೌದು ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು 4,10,931 ಅಧಿಕ ಮತಗಳ ಅಂತರದಿಂದ ಚೊಚ್ಚಲ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಒಟ್ಟು 6,22,338 ಮತಗಳನ್ನು ಪಡೆದುಕೊಂಡಿದ್ದು, ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ ಸುಮಾರು 1,09,939 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!
2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.
ವಿಶೇಷವೆಂದರೆ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಒಟ್ಟು 6.47 ಲಕ್ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಇದೀಗ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.