ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸಾಕಷ್ಟು ನಟ, ನಟಿಯರು ತಮ್ಮ ನೆಚ್ಚಿನ ಅಭ್ಯರ್ಥಿ ಪರ ಬೀದಿಗಿಳಿದು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಕನ್ನಡ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿರುವ ನಟಿ ಮೇಘಾ ಶೆಟ್ಟಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು ಕೆಲವೊಂದು ಫೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.
ಸವದತ್ತಿ ವಿಧಾನಸಭಾ ಕ್ಷೇತ್ರದ ಸತ್ತಿಗೇರಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪೋಸ್ಟ್ ಮಾಡಿದ್ದಾರೆ.
ಇದೇ ಸಮಯದಲ್ಲಿ ಕಿರುತರೆ ನಟಿಯರು ಪ್ರಚಾರದಲ್ಲಿ ಭಾಗಿಯಾಗಿ ಸಾಥ್ ನೀಡಿರುವುದು ಖುಷಿ ತಂದಿದೆ. ಪ್ರಚಾರದಲ್ಲಿ ಶಾಸಕರಾದ ವಿಶ್ವಾಸ ಅಣ್ಣ ವೈದ್ಯ, ಗ್ರಾಮದ ಮುಖಂಡರು ಕಿರುತೆರೆ ನಟಿಯರಾದ ಮೇಘ ಶೆಟ್ಟಿ, ಮೌನ ಗುಡ್ಡೆಮನೆ, ಭವ್ಯಾ ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನಕ್ಕೆ ಎರಡು ದಿನಗಳು ಮಾತ್ರ ಬಾಕಿ ಉಳಿದಿದೆ. ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣಾ ಪ್ರಚಾರ ದಿನದ ಅಂತಿಮ ದಿನದಂದು ಏಪ್ರಿಲ್ 24ರಂದು ಬಹಿರಂಗ ಪ್ರಚಾರ ಕೊನೆಯಾಗಲಿದೆ.
ಮೇಘಾ ಶೆಟ್ಟಿ ಅವರು ಜೊತೆ ಜೊತೆಯಲಿ ಸೀರಿಯಲ್ನಲ್ಲಿ ನಟಿಸಿ ಫೇಮಸ್ ಆದರು. ಅದಾದ ನಂತರ ಅವರು ಸೋಷಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದು ಸದ್ಯ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ.
ರಾಜ್ಯಾದ್ಯಂತ ಅಭಿಮಾನಿಗಳನ್ನು ಹೊಂದಿರುವ ನಟಿ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ಭವ್ಯಾ ಗೌಡ ಅವರು ಕೂಡಾ ಈ ಪ್ರಚಾರದಲ್ಲಿ ಭಾಗಿಯಾಗಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)