ಚಾಮರಾಜನಗರ: ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಸಂಸತ್ನಲ್ಲಿ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ದಲಿತಪರ ಸಂಘಟನೆಗಳ ಕಾರ್ಯಕರ್ತರು ರಾಮಾಪುರದಲ್ಲಿ ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಸಂತೆಮಾಳ ಬಳಿ ಜಮಾಯಿಸಿದ್ದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಅಂಬೇಡ್ಕರ್ ಅವಮಾನಿಸಿದವರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರತ್ವ, ಸಮಾನತೆ, ನ್ಯಾಯದ ಪರವಾಗಿ ಅಂಬೇಡ್ಕರ್ ಅಡಿಪಾಯ ಹಾಕಿದ ಮಹಾನ್ ನಾಯಕ.
ಅವರ ಹೆಸರು ಮಾತ್ರವಲ್ಲ, ಅವರ ಆದರ್ಶಗಳು, ಕೃತಿಗಳು ಕೋಟ್ಯಂತರ ಭಾರತೀಯರಿಗೆ ಸ್ಫೂರ್ತಿಯಾಗಿವೆ. ಅಮಿತ್ ಶಾ ನೀಡಿರುವ ಹೇಳಿಕೆ ಗಮನಿಸಿದರೆ ದೇಶದ ಸಂವಿಧಾನದ ಅಡಿಪಾಯವನ್ನೇ ದ್ವೇಷಿಸಿ, ಅಲುಗಾಡಿಸುವಂತಿದೆ. ಸಮಾಜದ ಕೆಳ ವರ್ಗಗಳ ಜನರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಹೇಳಿದರು.