ಬೆಂಗಳೂರು:- ಕನ್ನಡಪರ ಹೋರಾಟಗಾರರಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇಂಗ್ಲಿಷ್ ನಾಮಫಲಕಗಳ ವಿರುದ್ಧ ಹೋರಾಟ ಮಾಡಿದ ಕರವೇ ನಾರಾಯಣಗೌರನ್ನ ಅರೆಸ್ಟ್ ಮಾಡಿರುವ ವಿಚಾರವಾಗಿ ಮಾತನಾಡಿ, ಕನ್ನಡದ ನಾಮಫಲಕವೂ ಇರಬೇಕು, ಹೋರಾಟಗಾರರನ್ನು ಬಂಧಿಸಿರೋದು ಕಾನೂನು ವಿಚಾರಕ್ಕೆ ಸಂಬಂಧಿಸಿದ್ದು, ಅದರ ಬಗ್ಗೆ ಗೊತ್ತಿಲ್ಲ ನನಗೆ. ಆದರೆ ನಾಮಫಲಕಗಳೂ ಕನ್ನಡದಲ್ಲೂ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.