ಬೆಂಗಳೂರು:- ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ ಗೆ ಸಂಬಧಪಟ್ಟಂತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
39ನೇ ಎಸಿಎಂಎಂ ಕೋರ್ಟ್ನಿಂದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಮತ್ತು ಇಲ್ತಾಜ್ಗೆ ಜಾಮೀನು ನೀಡಲಾಗಿದೆ. ಫೆಬ್ರವರಿ 27 ರಂದು ಆರೋಪಿಗಳು ಪಾಕ್ ಪರ ಘೋಷಣೆ ಕೂಗಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವಿನ ಬಳಿಕ ಆರೋಪಿಗಳು ಘೋಷಣೆ ಕೂಗಿದ್ದರು. ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಸಾಬೀತಾಗಿತ್ತು. ಬಳಿಕ ಮೂವರನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದರು.