ರಾಮನಗರ: ಬಿಡದಿಯ ಟೋಯೋಟಾ ಬುಶೋಕು ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಕಳೆದ ಮಾರ್ಚ್ 15 ರಂದು ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಕಾರ್ಖಾನೆಯ ಶೌಚಾಲಯದಲ್ಲಿ “ಪಾಕಿಸ್ತಾನ ಜೈ, ಕನ್ನಡಿಗರು ಸೂ,…. ಮಕ್ಕಳು ಎಂದು ಬರೆದಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉದ್ಯೋಗಿಗಳಿಗೆ ಕಂಪನಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಯಾರೇ ಕಿಡಿಗೇಡಿ ಇದ್ದರೂ ಕಠಿಣ ಕ್ರಮವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಜೈಲಿನಲ್ಲಿ ಕೈದಿಗಳ ಕೂಗಾಟ ಚೀರಾಟದ ವಿಡಿಯೋ ವೈರಲ್ : ಅಸಲಿಗೆ ಆಗಿದ್ದೇನು ಗೊತ್ತಾ.?
ಈ ಬಗ್ಗೆ ಆಡಳಿತ ಮಂಡಳಿ ಸುತ್ತೋಲೆ ಹೊರಡಿಸಿದ್ದು ಅದರಲ್ಲಿ, ರೀತಿಯ ಬರವಣಿಗೆಗಳು ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಮುಂದುವರೆದು ಈ ರೀತಿಯ ಬರವಣಿಗೆಗಳು ದೇಶದ ಕಾನೂನಿನ ಚೌಕಟ್ಟಿನಲ್ಲಿ “ದೇಶದ್ರೋಹಿ” ಅಪರಾಧಗಳಡಿಯಲ್ಲಿ ವರ್ಗೀಕೃತವಾಗಿರುತ್ತವೆ. ಈ ಕೃತ್ಯ ಇದೇ ರೀತಿ ಮುಂದುವರೆದಲ್ಲಿ ಮಾಹಿತಿಯನ್ನು ಪೊಲೀಸರ ಗಮನಕ್ಕೆ ತರುವುದರೊಂದಿಗೆ ಜೈಲು ವಾಸವಾಗುವವರೆಗೂ ಕಿಡಿಗೇಡಿಗಳನ್ನು ಬಿಡುವುದಿಲ್ಲ ಮತ್ತು ಬೆರಳಚ್ಚು ಹಾಗೂ ಬರವಣಿಗೆ ತಜ್ಞರ ಗಮನಕ್ಕೆ ತಂದು ಈ ಕೃತ್ಯ ಹೆಸಗುವವರನ್ನು ಕಂಡುಹಿಡಿದು ಹೆಚ್ಚಿನ ಮಟ್ಟದಲ್ಲಿ ಶಿಕ್ಷೆಯಾಗುವವರೆಗೂ ಆಡಳಿತ ಮಂಡಳಿಯು ಕಾಳಜಿ ವಹಿಸಲು ಸಿದ್ಧವಿರುತ್ತದೆ. ಯಾವುದೇ ಉದ್ಯೋಗಿಯು ಈ ರೀತಿಯ ಕಿಡಿಗೇಡಿ ಕೃತ್ಯ ಮಾಡುವಾಗ ಸಿಕ್ಕಿಬಿದ್ದಲ್ಲಿ ಅತ್ಯಂತ ಕಠಿಣ ಶಿಸ್ತಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ಮೂಲಕ ಆಡಳಿತ ಮಂಡಳಿಯು ತಿಳಿಸುತ್ತದೆ ಎಂದು ಸುತ್ತೋಲೆ ಹೊರಡಿಸಿದೆ.