ಬೆಳಗಾವಿ:- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ CT ರವಿ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ಜರುಗಿದೆ.
ಈ ಮೂಲಕ ದೊಡ್ಡ ಹೈಡ್ರಾಮವೇ ಜರುಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಮಾರ್ಷಲ್ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದರು. ಹೀಗಾಗಿ ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ.
ಏಕವಚನದಲ್ಲೇ ಏನೋ ಸೂ….ಮಗನೇ…. ನಮ್ಮಕ್ಕನಿಗೆ ಹೀಗಂದ್ಯಾ ಎಂದು ಓರ್ವ ವ್ಯಕ್ತಿ ಒದೆಯುವ ರೀತಿಯಲ್ಲಿ ಕಾಲೆತ್ತಿದ್ದಾನೆ. ಆಗ ಏನೋ ಎಂದ ರವಿ ಪ್ರಶ್ನಿಸಿದ್ದಾರೆ. ಆಗ ಸಿಟಿ ರವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಏಯ್, ಆಚೆ ಬಾರೋ, ಧೈರ್ಯವಿದ್ದರೆ ಹೊರಗೆ ಬಾ ಎಂದು ಏಕವಚನದಲ್ಲೇ ಆವಾಜ್ ಹಾಕಿದ್ದಾರೆ. ಈ ವೇಳೆ ಒಂದಿಬ್ಬರು ಹಲ್ಲೆಗೂ ಯತ್ನಿಸಿದ ಪ್ರಸಂಗ ನಡೆಯಿತು. ಇದರಿಂದ ಹೆಬ್ಬಾಳ್ಕರ್ ಬೆಂಬಲಿಗರ ವಿರುದ್ಧ ಕೆಂಡಾಮಂಡಲರಾದ ಸಿ.ಟಿ ರವಿ ʻಬಾ.. ಬಾ.. ಹೊಡಿ ಬಾ.., ಅದೇನ್ ಮಾಡ್ತಾರೆ ಮಾಡ್ಲಿ ಬಿಡ್ರಿ ಎಂದಿದ್ದಾರೆ.
ಇದರಿಂದ ದೊಡ್ಡ ಗಲಾಟೆ ಉಂಟಾಗಿದ್ದು, ಕೂಡಲೇ ಪೊಲೀಸರು ದೌಡಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರನ್ನು ಚದುರಿಸಿದರು. ಅಲ್ಲದೇ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಗಲಾಟೆ ನಡೆಯುವ ಸ್ಥಳದಲ್ಲೇ ಹೆಬ್ಬಾಳ್ಕರ್ ಸಹೋದರ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಾಣಿಸಿಕೊಂಡಿದ್ದಾರೆ.