ಮೈಸೂರು: ಪ್ರಗತಿಪರ ಚಿಂತಕ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರ ಗುರು (68) ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Benefits Of Ajwain: ಓಂ ಕಾಳು ಅಂದ್ರೆ ಮೂಗು ಮುರಿತೀರಾ? ಅದರ ಪ್ರಯೋಜನಗಳು ಎಷ್ಟಿದೆ ಗೊತ್ತಾ..?
ಹೈದರಾಬಾದ್ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಮಹೇಶ್ ಚಂದ್ರ ಗುರು ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾದರು.
ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು.