ಗದಗ: ನಿರ್ಮಿತಿ ಕೇಂದ್ರದ ಗುತ್ತಿಗೆ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್ ನಲ್ಲಿ ನಡೆದಿದೆ. ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಆಗಿದ್ದು, ಗದಗ ನಗರದ ಹಾತಲಗೇರಿ ನಿವಾಸಿ ಯಾಗಿರುವ ಶಂಕರಗೌಡ ಪಾಟೀಲ್ ರೂಂ ನಂಬರ್ 513 ರಲ್ಲಿಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಳಿಗಾಲದಲ್ಲೇ ಏಕೆ ಜಾಸ್ತಿ ಸೆಕ್ಸ್ ಮಾಡಬೇಕು ಅನಿಸುತ್ತೆ ಗೊತ್ತಾ..? ಇದಕ್ಕೆ ಕಾರಣ ಇಲ್ಲಿದೆ ನೋಡಿ
ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ ಕೊಲೆ ಮಾಡಿದ್ದಾರೆ. ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ.
ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಪ್ರಮೋಶನಕ್ಕೆನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ ಮೂರು ವಿಷಯಕ್ಕೆ ಸಾವು ಅಂತ ಅನುಮಾನ ಇದೆ ಎಂದಿದ್ದಾರೆ.