ಮೈಸೂರು: ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಮಂಜು ಎಸ್. ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಛೇರಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಜಿಲ್ಲಾ ಮ,
ತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮತ್ತು ಅವುಗಳ ರೂಪುರೇಷೆಗಳನ್ನು ತಯಾರಿಸುವ ಬಗ್ಗೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾಗಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗದಿ ಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸದಸ್ಯರು ತಿಳಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು, ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದ ಅವರು ಮಕ್ಕಳಿಗೆ ಶೌಚಾಲಯ, ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದಿಂದ ನೀಡುವ ಅಗತ್ಯ ಮಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು. ಎಲ್ಲಾ ಶಾಲೆಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ, 1098 ಶಾಲೆಗಳಲ್ಲಿ ಚೈಲ್ಡ್ಲೈನ್ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)