ಬೆಂಗಳೂರು: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿ ಸಂವಿಧಾನಕ್ಕೆ ದಕ್ಕೆ ಉಂಟು ಮಾಡಿರುವ ಕೇಂದ್ರ ಸಚಿವ ಅಮಿತ್ ಶಾ ರವನ್ನ ರಾಷ್ಟ್ರದಿಂದ ಗಡಿಪಾರು ಮಾಡಬೇಕು ಸಚಿವ ಸ್ಥಾನಕ್ಕೆ ರಾಜೀನಾಮೆ ಮಾಡಬೇಕು ಅಂತ ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಒಕ್ಕೂಟದ ವತಿಯಿಂದ ಪಂಜಿನ ಮೆರವಣಿಗೆ ಮತ್ತು ರಸ್ತೆ ತಡೆದು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಜೈ ಭೀಮ್ ಐಕ್ಯತೆ ವೇದಿಕೆ ವತಿಯಿಂದ ಆನೇಕಲ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಇನ್ನು ಕೇಂದ್ರ ಸರ್ಕಾರದ ಅಮಿತ್ ಶಾ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಜಾತಿ ವಿರೋಧಿ ಹೇಳಿಕೆಯನ್ನು ನೀಡುತ್ತಿರುವ
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ಮತ್ತು ಸಂವಿಧಾನಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಕೇಂದ್ರ ಸಚಿವರನ್ನು ಗಡಿಪಾರು ಮಾಡಬೇಕು ಕೋಮುವಾದಿ ಮತ್ತು ಮನುವಾದಿ ಮನಸ್ಥಿತಿ ಹೊಂದಿರುವ ಕೇಂದ್ರ ಸಚಿವ ಅಮಿತ್ ಶಾ ಕೂಡಲೇ ಭಾರತದ ಪೌರತ್ವವನ್ನು ರದ್ದು ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಇನ್ನು ದಲಿತ ಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.