ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ತಲಾ 3 ಹಾಗೂ 3.50 ರೂ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯಾತೀತ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ ಅವರು ಕೂಡ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದರು. ಪ್ರತಿಭಟನೆಯ ನಂತರ ಫ್ರೀಡಂ ಪಾರ್ಕ್ ನಿಂದ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು.
ಇನ್ನೂ ಬೆಲೆ ಏರಿಕೆ ವಾಪಸ್ ಪಡೆಯದಿದ್ರೆ ಉಗ್ರ ಹೋರಾಟದ ಎಚ್ಚರಿಕೆ ಕೂಡ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ರಮೇಶ್ ಗೌಡ, ಎಂ.ಎಲ್.ಸಿ ತಿಪ್ಪೇಸ್ವಾಮಿ, ಎಂ.ಎಲ್.ಸಿ ಜವರೇಗೌಡ ಮತ್ತು ಇತರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.