ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಾಗೂ ಕರವೇ ಅಧ್ಯಕ್ಚ ನಾರಾಯಣ್ ಗೌಡ ಬಿಡುಗಡೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ 124 ನೇ ಪ್ರತಿಭಟನೆ ನಡೆಸಿದ ಹೋರಾಟಗಾರರು, ಪ್ರತಿನಿತ್ಯ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸತತವಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಹಾಗೂ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರೋದನ್ನು ವಿರೋಧಿಸಿ ಕೂಡಲೆ ಬಿಡುಗಡೆ ಮಾಡುವಂತೆ ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡು ಒತ್ತಾಯ ಮಾಡಿದ್ದಾರೆ.