ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಮಂಡ್ಯದ ಸಂಜಯ್ ವತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಹೋರಾಟಗಾರ್ತಿ ಸುನಂದಾ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು,
ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತ, ಹಾಗೂ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ವಿಜ್ಞಾನಿಗಳಿಗೆ ಗೋ ಬ್ಯಾಕ್ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಇದೇ ವೇಳೆ ರೈತ ಹೋರಾಟಗಾರರ ಪ್ರತಿಭಟನಾ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ ಆಲಿಸಿದರು. ಕೇಂದ್ರ ಸಚಿವರಿಗೆ ಮನವಿ ಮಾಡಿ ಟ್ರಯಲ್ ಬ್ಲಾಸ್ಟ್ ನಡೆಸಲು ಅವಕಾಶ ಮಾಡಿಕೊಡದಂತೆ ಮನವಿ ಮಾಡಿದರು. ಸಮಸ್ಯೆ ಆಲಿಸಿದ ಕುಮಾರಸ್ವಾಮಿ ಟ್ರಯಲ್ ಬ್ಲಾಸ್ಟ್ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು.