ಬೆಂಗಳೂರು:- ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಸಮರ ಸಾರಿದ್ದಾರೆ. ಈಸ ಹಿನ್ನೆಲೆ, ಸರ್ಕಾರದ ವಿರುದ್ದ ರಸ್ತೆಗಿಳಿದು ಪ್ರತಿಭಟಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಜ್ಜಾಗಿದ್ದಾರೆ.
ಆಫ್ಲೈನ್ ನೇಮಕಾತಿಗೆ ಆಗ್ರಹಿಸಿ ಅಂಗನವಾಡಿ ನೌಕರರು ಅನಿರ್ದಿಷ್ಟವಧಿ ಪ್ರತಿಭಟನೆ ಮಾಡಿದ್ದು, ನ.20 ರಿಂದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಲಿದೆ..
ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದೆ.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಕಾರಣವೇನು?*
-ಬೆಂಗಳೂರು ನಗರದಲ್ಲಿ ಒಟ್ಟು 2877 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ
-ಇದ್ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ 430,
ಸಹಾಯಕಿಯರ ಹುದ್ದೆ 1198 ಖಾಲಿ ಇವೆ
– ಈ ಹುದ್ದೆಗಳಿಗೆ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ
-ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು
– ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ
– ಅರ್ಜಿ ಸಲ್ಲಿಸಿ 8 ತಿಂಗಳು ಕಳೆದ್ರು ಇಲಾಖೆಯ ಕಡೆಯಿಂದ ಯಾವಯದೇ ಉತ್ತರ ಬಂದಿಲ್ಲ
-ಅಂಗನವಾಡಿಯಲ್ಲಿ ಸಾಕಷ್ಟು ಕೆಲಸ ಪ್ರತಿನಿತ್ಯ ಇರುವುದ್ರಿಂದ ಒಬ್ಬರ ಕೈಯಲ್ಲಿ ನಿಭಾಯಿಸಲು ಸಾಧ್ಯವಿಲ್ಲ
– ಆದ್ರಿಂದ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ