ಗದಗ: ಗ್ರಾಮ ಆಡಳಿತ ಅಧಿಕಾರಿ ಬೆಳೆ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಸರಿಯಾಗಿ ಕೆಲಸಕ್ಕೆ ಬರುತ್ತಿಲ್ಲ ಜೊತೆಗೆ ಸರ್ಕಾರದ ಪ್ರತಿಯೊಂದು ಕೆಲಸಕ್ಕೂ ಹಣ ನೀಡುವಂತೆ ವಿನಾಕಾರಣ ಅಲೆದಾಡಿಸುತ್ತಿದ್ದಾರೆಂದು ಆರೋಪಿಸಿ ಕೊಠಡಿ ಒಳಗೆ ಕೂಡಿಹಾಕಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ ಸಿಂಗ್ ರಾಜಪೂತ ಗ್ರಾಮ ಆಡಳಿತ ಅಧಿಕಾರಿಯಾಗಿದ್ದು ಕಚೇರಿಗೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ರು. ನಂತರ ಸ್ಥಳಕ್ಕೆ ಆಗಮಿಸಿದ ರೋಣ ಪೊಲೀಸರು ಗ್ರಾಮಸ್ಥರನ್ನ ಸಮಾಧಾನಪಡಿಸಿ ಬೀಗ ತೆಗೆಸಿದ್ರು.