ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಫಲಿತಾಂಶ (PSI Exam Result) ಪ್ರಕಟ ಮಾಡುವಂತೆ ಆಗ್ರಹ ಪೊಲೀಸ್ ಹುದ್ದೆ ಆಕಾಂಕ್ಷಿಗಳು ಇಂದು ಪ್ರತಿಭಟನೆ (Protest) ನಡೆಸಲಿದ್ದಾರೆ.
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್!
ಬೆಳಗ್ಗೆ 10 ಗಂಟೆಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಫಲಿತಾಂಶ ಪ್ರಕಟಿಸಲು ಆದೇಶ ನೀಡುವಂತೆ ಸರ್ಕಾರ ಹಾಗೂ ಗೃಹ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.
4 ವರ್ಷ ಕಳೆದರೂ ತಪ್ಪದ ಗೋಳು:
2020ರಲ್ಲಿ 545 ಪಿಎಸ್ಐ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 2021ರ ಅಕ್ಟೋಬರ್ 3ರಂದು ಪರೀಕ್ಷೆ ನಡೆಸಲಾಗಿತ್ತು. 2022ರ ಜನವರಿ 19ರಂದು ಫಲಿತಾಂಶ ಕೂಡ ಪ್ರಕಟವಾಗಿತ್ತು. ಆದ್ರೆ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಅಂದಿನ ಸರ್ಕಾರ ಮರುಪರೀಕ್ಷೆಗೆ ಆದೇಶ ನೀಡಿತ್ತು. ಇದನ್ನು ವಿರೋಧಿಸಿ ಆಯ್ಕೆಯಾದ ವಿದ್ಯಾರ್ಥಿಗಳು ನ್ಯಾಯಾಲಯದ ಕದ ತಟ್ಟಿದ್ದರು.
ವಿಚಾರಣೆ ನಡೆಸಿದ್ದ ಕೋರ್ಟ್ 2023ರ ನವೆಂಬರ್ 19ರಂದು ಮರು ಪರೀಕ್ಷೆ ಸೂಕ್ತ ಎಂದು ಹೇಳಿತು. ಮರುಪರೀಕ್ಷೆಗೆ ಆದೇಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನಂತರ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಗಲಿಗೆ ಮರು ಪರೀಕ್ಷೆ ಜವಾಬ್ದಾರಿ ನೀಡಿತ್ತು. ಈ ಹಿನ್ನೆಲೆಯಲ್ಲಿ 2024ರ ಜನವರಿ 23ರಂದು ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆ ನಡೆಸಿತ್ತು. 2024ರ ಮಾರ್ಚ್ 1ರಂದು ಅಭ್ಯರ್ಥಿಗಳ ಅಂಕ ಪಟ್ಟಿಯನ್ನು ಮುಂದಿನ ಪ್ರಕ್ರಿಯೆಗಾಗಿ ಕೆಎಸ್ಪಿ (ಕರ್ನಾಟಕ ರಾಜ್ಯ ಪೊಲೀಸ್)ಗೆ ವರ್ಗಾವಣೆ ಮಾಡಿತ್ತು. ಅದರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸರ್ಕಾರಕ್ಕೆ ತಮ್ಮ ರಕ್ತದಲ್ಲಿಯೂ ಸಹ ಪತ್ರ ಬರೆದು ಮನವಿ ಮಾಡಿದ್ದರು.