ಕೋಲಾರ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೇಕಾದ ೮೦ ಎಕರೆ ಜಾಗ ಗುರುತಿಸಿಲ್ಲ ಎಂದು ರೈತ ಸಂಘ ಹಾಗೂ ಜೆಡಿಎಸ್ ನಿಂದ ಪ್ರತಿಭಟನೆ ಮಾಡಲಾಯಿತು. ಕೋಲಾರ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಎದುರು ಸರ್ಕಾರ ಹಾಗೂ ಜಿಲ್ಲಾಡಳಿತ ದ ವಿರುದ್ದ ಜಾನುವಾರು,
ಬಂಡಿ, ಟ್ರಾಕ್ಟರ್, ಹಣ್ಣು- ತರಕಾರಿ, ಸೊಪ್ಪುಇನೊಂದಿಗೆ ಪ್ರತಿಭಟನೆ ನಡೆಸಿದರು. ಎಪಿಎಂಸಿ ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನೂ ಹೆದ್ದಾರಿ ತಢದ್ರೆ ಹೋರಾಟಗಾರರನ್ನ ಬಂಧಿಸುವ ಸಾಧ್ಯತೆ ಇದೆ.