ಬೀದರ್: ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಶೋಷಿತರ ಸಂರಕ್ಷಣಾ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿ ಕೆಲಹೊತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಸಲ್ಲಿಸಿದರು.
Grama panchayat jobs: ಪರೀಕ್ಷೆ ಇಲ್ಲದೆ ನೇರ ನೇಮಕಾತಿ..!ಜಸ್ಟ್ PUC ಪಾಸಾದರೆ ಸಾಕು – ತಿಂಗಳಿಗೆ ₹63,000 ಸಂಬಳ.!
ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡುವ ಕುಕೃತ್ಯಗಳು ನಡೆಯುತ್ತಿವೆ. ಬಾಬಾ ಸಾಹೇಬರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದನ್ನು ಬರೆದು ಪೋಸ್ಟ್ ಮಾಡಲಾಗುತ್ತಿದೆ. ಇನ್ನೊಂದೆಡೆ ಸಂಸದ ಅನಂತಕುಮಾರ ಹೆಗಡೆ ಪುನಃ ಪುನಃ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಆರೋಪಿಸಿ ಪ್ರತಿಭಟನೆ. ಸಮಿತಿ ಜಿಲ್ಲಾಧ್ಯಕ್ಷ ವಿಷ್ಣುವರ್ಧನ್ ವಾಲದೊಡ್ಡಿ, ಕಾರ್ಯಾಧ್ಯಕ್ಷ ವಿನೋದ್ ರತ್ನಾಕರ ಗೌರವ ಅಧ್ಯಕ್ಷ ರಾಜಕುಮಾರ ಮೂಲಭಾರತಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿ ದ್ದರು.