ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ವಿಶೇಷ ಚೇತನರ ಸಂಘದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ವಿಶೇಷಚೇತನರಿಗೆ ರಾಜ್ಯಾದ್ಯಂತ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ವಿಆರ್ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು. ಐದಾರು ತಿಂಗಳಿಗೊಮ್ಮೆ ಗೌರವಧನ ಸಿಗುತ್ತಿದ್ದು,
ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! ಮಾಡಿದ್ರೆ ಕಷ್ಟ ಬರುತ್ತದೆ!
ಸಮಯಕ್ಕೆ ಸರಿಯಾಗಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು. ೫ ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಲ್ ಕಾರ್ಡ್ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.