ಗದಗ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ ಕೆ ಶಿವಕುಮಾರರನ್ನ ಸಚಿವ ಸಂಪುಟದಿಂದ ವಜಾ ಮಾಡಲು ಹಾಗೂ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯಿಸಿ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಡಿ ಕೆ ಶಿವಕುಮಾರ ವಿರುಧ್ದ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಾಲ್ನಡಿಗೆಯಲ್ಲಿ ತಹಶೀಲ್ದಾರ ಕಚೇರಿ ವರೆಗೆ ತೆರಳಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ ಮಾಡಿದರು.
ಪ್ರತಿಭಟನೆಯಲ್ಲಿ ಗದಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ವೈ ಮುಧೋಳ್, ಗದಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಮೇಟಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.