ಧಾರವಾಡ: ಸಂಗೀತ, ಚಿತ್ರಕಲಾ,ರಂಗಕಲಾ ಹಾಗೂ ದೈಹಿಕ ಶಿಕ್ಷಕರ ನೇಮಕಾತಿಗೆ ಅಗ್ರಹಿಸಿ ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಎಐಡಿವೈಓ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅತಿಥಿ ಉಪನ್ಯಾಸಕರು, ಸಂಗೀತ ವಿದ್ಯಾರ್ಥಿಗಳು ಸೇರಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಕಾರಣ ನೀಡಿ ಹುದ್ದೆಗಳ ರದ್ದು ಮಾಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆಯಾಗುತ್ತಿದೆ. ನಿರುದ್ಯೋಗ ಸಮಸ್ಯೆಯಿಂದ ಈಗಾಗಲೇ ಯುವ ಸಮುದಾಯ ತತ್ತರಿಸಿ ಹೋಗಿದೆ. ಈ ಕೂಡಲೇ ಸರ್ಕಾರ ನೇಮಕಾತಿ ಮಾಡಬೇಕು, ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.