ಮೈಸೂರು: ಮುಡಾ ಸೈಟ್ ಹಂಚಿಕೆ ಹಗರಣ ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದರು. ಇದರೊಂದಿಗೆ ಮೈಸೂರಿನ ರಾಮಸ್ವಾಮಿ ಸರ್ಕಲ್ ಬಳಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
Driving License ಕಳೆದು ಹೋಗಿದ್ಯಾ.? ಹಾಗಿದ್ರೆ ಮರಳಿ ಪಡೆಯಲು ಹೀಗೆ ಮಾಡಿ ಸಾಕು
ಪ್ರತಿಭಟನಾಕಾರರ ವಾಹನವನ್ನು ಕೂಡ ಸೀಜ್ ಮಾಡಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಶಾಸಕ ಶ್ರೀವತ್ಸ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಲೋಕಾಯುಕ್ತ ತನಿಖೆಯಿಂದ ಏನೂ ಆಗಲ್ಲ. ಸಿದ್ದರಾಮಯ್ಯ ಪ್ರಮಾಣಿಕರಾಗಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೇಸರಿಪಡೆ ಆಗ್ರಹಿಸಿದೆ. ಸಿಎಂ ನನ್ನದು ತೆರೆದ ಪುಸ್ತಕ ಅಂತಾರೆ. ಹಾಗಾಗಿ ಸಿಬಿಐ ತನಿಖೆಗೆ ಕೊಡಲಿ. ಸತ್ಯಾಸತ್ಯತೆ ಹೊರಗೆ ಬರಲಿ ಅಂತಾ ಪಟ್ಟು ಹಿಡಿದಿದ್ದಾರೆ.