ಧಾರವಾಡ- ನರೇಗಾ ಯೋಜನೆಯ ಬಾಕಿ ಹಣ ಬಿಡುಗಡೆ ಹಾಗೂ ಬರ ಪರಿಹಾರ ಕಾಮಗಾರಿ ಜಾರಿ ಮಾಡಲು ಅಗ್ರಹಿಸಿ, ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಕೃಷಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ, ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸಚಿವರು ಪಂಚ ರಾಜ್ಯ ಚುನಾವಣೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ತಮ್ಮ ರಾಜ್ಯದಲ್ಲಿನಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲದಂತಾಗಿದೆ.
ಬರಗಾದಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ದಿನದಿಂದ ದಿನಕ್ಲೆ ಕಡಿಮೆಯಾಗುತ್ತಿವೆ. ಇದರಿಂದ ಕೃಷಿ ಕಾರ್ಮಿಕರು ಪರದಾಡುತ್ತಿದ್ಧಾರೆ. ಈ ಕೂಡಲೇ ರಾಜ್ಯ ಸರ್ಕಾರ ಬರಗಾಲ ಪರಿಹಾರ ಕಾಮಗಾರಿಯನ್ನು ಜಾರಿ ಮಾಡಬೇಕು, ಜೊತೆಗೆ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಶುಲ್ಕ ಏರಿಸುವ ನಿರ್ಧಾರದಿಂದ ಹೊಂದೆ ಸರಿಯಬೇಕು ಎಂದು ಅಗ್ರಹಿಸಿದರು.
ಒಂದುವೇಳೆ ಈ ಎಲ್ಲ ಬೇಡಿಕೆಗಳಿ ಸ್ಪಂದನೆ ಮಾಡದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

