ವಿಜಯಪುರ:- ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ಜರುಗಿದೆ.
ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಯೋಗಿ ಅಂತ ಸಿಎಂ ಬೇಕು ಎಂದು ಮಹಿಳೆ ಆಕ್ರೋಶ!
ಗಾಂಧಿ ಚೌಕ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿದ್ದು, ಗಾಂಧಿ ಚೌಕ್ ನಲ್ಲಿ ಕೊಲೆ ಆರೋಪಿ ಫಯಾಜ್ ಭಾವಚಿತ್ರಕ್ಕೆ ಚಪ್ಪಲಿಯೇಟು ಕೊಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಹಿಳೆಯರಿಗಿಲ್ಲ ರಕ್ಷಣೆ ಎಂದು ಘೋಷಣೆ ಕೂಗಿದ್ದಾರೆ. ಮಹಿಳೆಯರಿಗೆ ಕೊಡುವ ಉಚಿತ ಯೋಜನೆ ತಗೊಂಡು ಏನ್ಮಾಡೋಣ, ಮೊದಲು ಮಹಿಳೆರಿಗೆ ರಕ್ಷಣೆ ಕೊಡಿ ಎಂದು ಕಿಡಿಕಾರಿದ್ದಾರೆ. ಕೊಲೆ ಆರೋಪಿ ಫಯಾಜ್ ಗೆ ಗಲ್ಲು ಶಿಕ್ಷೆ ನೀಡಿ ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದರು.