ಗದಗ:- ಒಳ ಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಗದಗನಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ವಿಜ್ಞಾನ ಪ್ರಶ್ನೆಪತ್ರಿಕೆ ಸರಳೀಕರಣಗೊಳಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಕೆ!
ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಲಾಗಿದೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಸಂವಿಧಾನ ಬದ್ದವಾಗಿ ನಮ್ಮ ಮೀಸಲಾತಿ ಹಕ್ಕು ನಮಗೆ ನೀಡಿ ಎಂದು ಆಗ್ರಹಿಸಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಿದ್ದರೆ ಮತ್ತೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಕಾರ್ಯಕರ್ತರು ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.