ಕೋಲಾರ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ, ಸಿಪಿಐಎಂ, ಹಾಗೂ ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ,
PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ
ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ ಮಾತನಾಡುವಾಗ ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕರವರನ್ನು ವ್ಯಸನಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಇದು ಅವರ ದುರಹಂಕಾರ ಮತ್ತು ಅಂಬೇಡ್ಕರ್ ರವರ ಬಗ್ಗೆ ಸಂಘ ಪರಿವಾರ ಹೊಂದಿರುವ ನಿಜ ಸ್ಥಿತಿಯನ್ನು ಬಯಲು ಮಾಡಿದೆ ಕಳೆದ ಲೋಕಸಭಾ ಚುನಾವಣೆಗಳು ಉತ್ತರ ಕೊಟ್ಟಿವೆ ಆದರೂ ಬಿಜೆಪಿ ಮತ್ತು ಸಂಘ ಪರಿವಾರದ ದುರಹಂಕಾರ ಕಮ್ಮಿ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.