ಚಿಕ್ಕೋಡಿ ಚರಮೂರ್ತಿ ಮಠದ ಶ್ರೀ ಸಂಪಾದನಾ ಮಹಾಸ್ವಾಮಿಗಳ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಚೌಕದಿಂದ ಕೆ.ಸಿ.ರಸ್ತೆ, ಗುರುವಾರ ಪೇಠ, ಅಂಕಲಿ ಕುಟ್ ಮೂಲಕ ಬಸವ ವೃತ್ತದವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲೆ ರಚಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಸವ ವೃತ್ತದಲ್ಲಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಚಿಕ್ಕೋಡಿಯ ಶ್ರೀ ಸಂಪಾದನಾ ಸ್ಮಹಾಸ್ವಾಮೀಜಿ ಮಾತನಾಡಿ, ಕಳೆದ ಹಲವು ದಶಕಗಳಿಂದ ಚಿಕ್ಕೋಡಿ ಜಿಲ್ಲೆಗೆ ಬೇಡಿಕೆ ಇದೆ. ಚಿಕ್ಕೋಡಿ ಜಿಲ್ಲೆ ಮಾಡಿದರೆ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಯಾಗಲಿದೆ. ಆದರೆ ರಾಜಕೀಯ ಇಚ್ಛಾಶಕ್ತಿಯಿಂದ ಚಿಕ್ಕೋಡಿ ಜಿಲ್ಲೆಯ ಆಗ್ತಾ ಇಲ್ಲ. ರಾಜ್ಯ ಸರಕಾರ ಕೂಡಲೇ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಮಾತನಾಡಿ, ಚಿಕ್ಕೋಡಿ ಜಿಲ್ಲೆ ರಚನೆಗ ಮಾಡುವ ಭರವಸೆ ನೀಡುವ ರಾಜ್ಯ ಸರಕಾರ ಕೂಡಲೇ ಜಿಲ್ಲೆಯನ್ನು ಘೋಷಣೆ ಮಾಡಬೇಕು. ಈ ರಾಜ್ಯ ಸರ್ಕಾರಕ್ಕೆ ಜನಸಾಮಾನ್ಯರ ಅಭಿವೃದ್ಧಿ ಬೇಕಾಗಿಲ್ಲ, ಅದಕ್ಕಾಗಿಯೇ ಚಿಕ್ಕೋಡಿ ಜಿಲ್ಲೆಯನ್ನು ರಚಿಸಲಾಗಿಲ್ಲ. ಈ ನಿಟ್ಟಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಿಕ್ಕೋಡಿ ಜಿಲ್ಲೆಯ ಸಮಸ್ಯೆಯನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ಕೂಡಲೇ ಚಿಕ್ಕೋಡಿ ಜಿಲ್ಲೆ ರಚಿಸಬೇಕು ಇಲ್ಲವಾದಲ್ಲಿ ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದರು.
Friday Remedy: ಶುಕ್ರವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ.! ಬಡತನ ಕಾಡುತ್ತೆ
ಈ ಸಂದರ್ಭದಲ್ಲಿ ವಕೀಲ ಸಂಘದ ಉಪಾಧ್ಯಕ್ಷ ಅಶೋಕ್ ಯರ್ನಾಳೆ ಮಾತನಾಡಿ, ಚಿಕ್ಕೋಡಿ ಜಿಲ್ಲೆಯಾಗಬೇಕೆಂಬ ಪ್ರತಿ ಚಳವಳಿಯಲ್ಲಿ ಚಿಕ್ಕೋಡಿ ವಕೀಲರ ಸಂಘ ಭಾಗವಹಿಸುತ್ತಿದೆ. ಚಿಕ್ಕೋಡಿ ಜಿಲ್ಲೆ ಸಮಾಜದ ಎಲ್ಲ ವರ್ಗದವರಿಗೂ ಅನುಕೂಲವಾಗಲಿದೆ. ಆದ್ದರಿಂದ ರಾಜ್ಯ ಸರಕಾರ ಕೂಡಲೇ ಚಿಕ್ಕೋಡಿ ಜಿಲ್ಲೆ ರಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ವಕೀಲರ ಸಂಘವೂ ಸಹ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು
ಚಿಕ್ಕೋಡಿ ಜಿಲ್ಲಾ ಆಂದೋಲನ ಸಮಿತಿ ಅಧ್ಯಕ್ಷ ಸಂಜು ಬಡಿಗೇರ್, ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ, ಮಾಜಿ ಪೂರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ, ನ್ಯಾಯವಾದಿ.ಎಸ್.ಆರ್.ವಾಲಿ, ಎಚ್.ಎಸ್.ನಸಲಾಪುರೆ, ಬಿ.ಎನ್.ಪಾಟೀಲ, ಮಹಾದೇವ ಭೆಂಡವಾಡೆ, ಸಂಜಯ ಪಾಟೀಲ, ಪ್ರಕಾಶ ಅನ್ವೇಕರ, ಮೋಹನ ಮೋಟನವರ, ನ್ಯಾಯವಾದಿ ಹುದಾರ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಉಪಸ್ಥಿತರಿದ್ದರು.ಆ ವೇಳೆ ಡಿವೈಎಸ್ಪಿ ಗೋಪಾಲಕೃಷ್ಣಗೌಡರ್, ಪಿಎಸ್ಐ ಬಸಗೌಡ ನೇರ್ಲಿ, ಚಿಕ್ಕೋಡಿ ಅಂಕಲಿ, ಸದಲಗಾ ಖಡಕಲಾಟ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.