ಧಾರವಾಡ: ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಮಾದಿಗರ ಸಂಘದ ಸದಸ್ಯರು ರಾಜ್ಯದ ಎಲ್ಲ ಶಾಸಕರ ಮನೆ ಮುಂದೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಅದೇ ರೀತಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಧಾರವಾಡ ನಿವಾಸದ ಎದುರು ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಸಂಬಂಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
Weight Loss: ತೂಕ ಇಳಿಕೆಗಾಗಿ ಉಪವಾಸ ಮಾಡ್ತಿರಾ..? ಹಾಗಾದ್ರೆ ಈ ಸಲಹೆಗಳ ಬಗ್ಗೆ ಗಮನಹರಿಸಿ!
ಚಳಿಗಾಲದ ಅಧಿವೇಶನದಲ್ಲಿ ಕಲಾಹರಣ ಮಾಡದೇ ಮಾದಿಗ ಸಮಾಜಕ್ಕೆ ಸಿಗಬೇಕಾದ ಸವಲತ್ತುಗಳು ಹಾಗೂ ಒಳ ಮೀಸಲಾತಿ ಜಾರಿ ಮಾಡುವ ಸಂಬಂಧ ಚರ್ಚೆ ನಡೆಸಬೇಕು ಅಲ್ಲದೇ ಸದನದಲ್ಲಿ ಈ ಪ್ರಶ್ನೆ ಎತ್ತಬೇಕು ಎಂದು ಆಗ್ರಹಿಸಿದರು.