ರಾಮನಗರ:- ಪೊರಕೆ ಹಿಡಿದು ವಾಟಾಳ್ ಪ್ರತಿಭಟನೆ ನಡೆಸಿದ್ದು, ಎಂಇಎಸ್ ನಿಷೇಧಕ್ಕೆ ಒತ್ತಾಯ ಮಾಡಿದ್ದಾರೆ. ಈ ಘಟನೆ ರಾಮನಗರದಲ್ಲಿ ಜರುಗಿದೆ.
ಮೊಟ್ಟೆ ಒಡೆದು ಹೋಗದಂತೆ ಬೇಯಿಸುವುದು ಹೇಗೆ ಗೊತ್ತಾ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!
ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ ಮಾಡುವಂತೆ ಪೊರಕೆ ಹಿಡಿದು ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿ ದಿನೇದಿನೇ ಎಂಇಎಸ್ ಪುಂಡಾಟ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಗ್ರಾ.ಪಂ ಅಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಕನ್ನಡದಲ್ಲಿ ದಾಖಲಾತಿ ನೀಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದರೆ ಅವರ ಪುಂಡಾಟಕ್ಕೆ ಮಿತಿ ಇಲ್ಲದಂತಾಗಿದೆ. ಪದೇಪದೇ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಕೆಲಸವನ್ನು ಎಂಇಎಸ್ ಮಾಡುತ್ತಿದೆ. ಅದಕ್ಕಾಗಿ ಮಾ.22ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ಎರಡು ಸಾವಿರ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಅಖಂಡ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ. ರಾಜ್ಯದ ನೀರಾವರಿ ಯೋಜನೆಗಳು ಶೀಘ್ರ ಜಾರಿಯಾಗಬೇಕು. ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು.